ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ

ಹಾವೇರಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾಆರೋಗ್ಯ ವಿಸ್ತರಣಾ ಕೇಂದ್ರದಲ್ಲಿ ಖಾಲಿ ಇರುವ 11 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 16/06/2023 ರಿಂದ 22/06/2023 ರೊಳಗಾಗಿ ಅಂಚೆ ಕಚೇರಿಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಕಚೇರಿಯ ವಿಳಾಸ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು,
ಜಿಲ್ಲಾ ಆಡಳಿತ ಭವನ ಹಾವೇರಿ-581110
ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು MBBS ವಿದ್ಯಾರ್ಹತೆಯನ್ನು ಕನಿಷ್ಠ 55% ದೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಪಡೆದಿರಬೇಕು.
- ವೃತ್ತಿಯ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments