ಹಾವೇರಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ

ಹಾವೇರಿ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಆರೋಗ್ಯ ವಿಸ್ತರಣಾ ಕೇಂದ್ರದಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 03/02/2023 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು,
ಜಿಲ್ಲಾ ಆಡಳಿತ ಭವನ ಹಾವೇರಿ - 581110
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮುಖಾಂತರ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು MBBS ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಅಸ್ಲಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 50 ವರ್ಷ ವಯೋಮಿತಿಯನ್ನು ಮೀರಿರಬಾರದು.
ಸರ್ಕಾರಿ ಸೇವೆಯಿಂದ ವಯೋನಿವೃತ್ತಿ ಹೊಂದಿದವರು 65 ವರ್ಷ ವಯೋಮಿತಿ ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 60,000/- ವೇತನವನ್ನು ನಿಗದಿಪಡಿಸಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments