ಹಾವೇರಿ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಹಾವೇರಿ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ, ಖಾಲಿ ಇರುವ ಒಟ್ಟು 31 ಸಮುದಾಯ ಆರೋಗ್ಯ ಅಧಿಕಾರಿಗಳು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅನುಭವ ಹೊಂದಿದವರೆಗೆ ಮೊದಲ ಆದ್ಯತೆ ನೀಡಲಾಗುವುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 23/01/2022 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ : 08 ಜನವರಿ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23 ಜನವರಿ 2022
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ ಈ ಕೆಳಗಿನ ವಯೋಮಿತಿಯನ್ನು ಮೀರಿರಬಾರದು,
* ಸಾಮಾನ್ಯವರ್ಗ 40 ವರ್ಷ
* ಹಿಂದುಳಿದ ವರ್ಗ 38 ವರ್ಷ
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 35 ವರ್ಷಗಳ ಗರಿಷ್ಠ ವಯೋಮಿತಿಗಳನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆ ಆದ ಅಭ್ಯರ್ಥಿಗಳು 22,000/- ಮಾಸಿಕ ವೇತನವನ್ನು ಪಡೆಯಲಿದ್ದಾರೆ.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.





Comments