ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ

ಭಾರತ ಸರ್ಕಾರದ ಗಣಿ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ದಲ್ಲಿ ಖಾಲಿ ಇರುವ ಎಲೆಕ್ಟ್ರಿಷಿಯನ್, ಫಿಟ್ಟರ್, ಕಾರ್ಪೆಂಟರ್, ಮೆಕ್ಯಾನಿಕ್ ಡೀಸೆಲ್ ಸೇರಿದಂತ್ತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 21.05.2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ, ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆಯಿಂದ S.S.L.C/ PUC/ ITI ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ಮತ್ತು ಮೀಸಲಾತಿಗನುಗುಣವಾಗಿ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments