ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ

ಭಾರತ ಸರ್ಕಾರದ ಗಣಿ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ದಲ್ಲಿ ಖಾಲಿ ಇರುವ 56 ಜೂನಿಯರ್ ಮ್ಯಾನೇಜರ್ (ಗಣಿಗಾರಿಕೆ), ಜೂನಿಯರ್ ಮ್ಯಾನೇಜರ್ (ಎಲೆಕ್ಟ್ರಿಕಲ್), ಜೂನಿಯರ್ ಮ್ಯಾನೇಜರ್ (ಹಣಕಾಸು) ಮತ್ತು ಜೂನಿಯರ್ ಮ್ಯಾನೇಜರ್ (HR) ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ21 ಜುಲೈ 2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ, ಮತ್ತು ದಾಖಲೆಗಳ ಪರಿಶೀಲನೆ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಾರಂಭ ದಿನಾಂಕ : 01 ಜುಲೈ 2024 ರಿಂದ 21 ಜುಲೈ 2024 ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 56
ಜೂನಿಯರ್ ಮ್ಯಾನೇಜರ್ (ಗಣಿಗಾರಿಕೆ) - 46
ಜೂನಿಯರ್ ಮ್ಯಾನೇಜರ್ (ಎಲೆಕ್ಟ್ರಿಕಲ್) - 6
ಜೂನಿಯರ್ ಮ್ಯಾನೇಜರ್ (ಕಂಪೆನಿ ಕಾರ್ಯದರ್ಶಿ) - 2
ಜೂನಿಯರ್ ಮ್ಯಾನೇಜರ್ (ಹಣಕಾಸು) - 1
ಜೂನಿಯರ್ ಮ್ಯಾನೇಜರ್ (HR) - 1
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆಯಿಂದ Diploma ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು
ಸಾಮಾನ್ಯ, OBC ಮತ್ತು EWS ಅಭ್ಯರ್ಥಿಗಳಿಗೆ: ₹500/-
ಎಲ್ಲಾ ಇತರೆ & PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 3 ವರ್ಷಗಳು
SC, ST ಅಭ್ಯರ್ಥಿಗಳಿಗೆ: 5 ವರ್ಷಗಳು
PWD (ಸಾಮಾನ್ಯ/ EWS) ಅಭ್ಯರ್ಥಿಗಳಿಗೆ: 10 ವರ್ಷಗಳು
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments