Loading..!

ಬಾಗಲಕೋಟೆ ಮತ್ತು ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
| Date:30 ಜೂನ್ 2019
not found
ಬಾಗಲಕೋಟೆ ಮತ್ತು ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಈ ಕುರಿತ ಚುರು ಮಾಹಿತಿ ನಿಮಗಾಗಿ

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಯೋಜನೆಯಡಿಯಲ್ಲಿ ತಾಲೂಕು ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಎಂಬಿಬಿಎಸ್ ವೈದ್ಯರುಗಳು, ತಜ್ಞ ವೈದ್ಯರುಗಳು, ಮತ್ತು ವಿವಿಧ ವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ ಗದಗ ಮತ್ತು ಬಾಗಲಕೋಟೆ ಜಿಲ್ಲಾ ವ್ಯಾಪ್ತಿಯಲ್ಲಿ ನೇಮಕಾತಿ ಮಾಡಲು ನೇರ ಸಂದರ್ಶನಕ್ಕೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ದಿನಾಂಕ 06-07-2019 ರಂದು ಮುಂಜಾನೆ 10:30 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ, ನವನಗರ, ಬಾಗಲಕೋಟ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ, ಗದಗ ಇಲ್ಲಿ ವಿದ್ಯಾರ್ಹತೆಯ ಎಲ್ಲ ಮೂಲ ಹಾಗೂ ಛಾಯಾ ಪ್ರತಿಯೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ ಗದಗ ಜಿಲ್ಲೆ : 08372-220307
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ ಬಾಗಲಕೋಟೆ ಜಿಲ್ಲೆ : 08354-235128
ಇಮೇಲ್ ವಿಳಾಸ ಬಾಗಲಕೋಟೆ ಜಿಲ್ಲೆ : dhobagalkte@gmail.com
No. of posts:  83
Application Start Date:  30 ಜೂನ್ 2019
Application End Date:  6 ಜುಲೈ 2019
to download official press releases
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ವಿಜ್ಞಾನ ಮತ್ತು ಭೂಗೋಳಶಾಸ್ತ್ರದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments