ಹೆಸ್ಕಾಮ್ ನೇಮಕಾತಿ 2025: ಒಟ್ಟು 338 ಅಪ್ರೆಂಟಿಸ್ ಹುದ್ದೆಗಳ ಭರ್ತಿ – ಆಸಕ್ತ ಅಭ್ಯರ್ಥಿಗಳು ನಿಗದಿತ ಅವಧಿಯಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಹ್ವಾನ

ಕರ್ನಾಟಕ ಸರಕಾರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಸುವರ್ಣಾವಕಾಶ. ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ 2025 ರ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನಂತರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳು HESCOM ನಲ್ಲಿ ಉತ್ತಮ ವೃತ್ತಿಪರ ಅನುಭವ ಮತ್ತು ಸ್ಥಿರ ಉದ್ಯೋಗ ದೊರಕಿಸಿಕೊಳ್ಳಲು ಅವಕಾಶ ನೀಡುತ್ತದೆ.
ಕರ್ನಾಟಕ ಸರಕಾರದ ಸಂಪೂರ್ಣ ಸ್ವಾಮ್ಯಕ್ಕೆ ಒಳಪಟ್ಟಿರುವ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (HESCOM) ನಲ್ಲಿ ಖಾಲಿ ಇರುವ 338 ಶಿಶುಕ್ಷುಗಳ(ಅಪ್ರೆಂಟಿಸ್) ಆಯ್ಕೆಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳಿಗೆ ಒಂದು ವರ್ಷದ ವರೆಗೆ ಉದ್ಯೋಗ ತರಬೇತಿ ನೀಡಲಿದ್ದು ಜೊತೆಗೆ ಸ್ಟೈಪೆಂಡ್ ಕೂಡ ಕೊಡಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಈ ಲೇಖನದಲ್ಲಿ ನಾವು ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಅರ್ಹತಾ ಮಾನದಂಡಗಳು ಮತ್ತು ಕೊನೆಯ ದಿನಾಂಕದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಕೂಡಲೇ ಅರ್ಜಿ ಸಲ್ಲಿಸಿ ಈ ಉದ್ಯೋಗಾವಕಾಶವನ್ನು ಬಳಸಿಕೊಳ್ಳಿ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ2025/09/18 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
📌ಹುದ್ದೆಗಳ ವಿವರ :
ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಬಿಇ ಪದವೀಧರರು : 200
ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪಡೆದವರು : 138
Comments