ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಿಂದ ನೂರಾರು ಗ್ರಾಮ ವಿದ್ಯುತ್ ಪ್ರತಿನಿಧಿ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಪ್ರಕಟ
Published by: Basavaraj Halli | Date:8 ನವೆಂಬರ್ 2021

- ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ವ್ಯಾಪ್ತಿಯಲ್ಲಿ ಬರುವ ಶಿರಸಿ, ಹುಬ್ಬಳ್ಳಿ, ಬೆಳಗಾವಿ, ಚಿಕ್ಕೋಡಿ, ವಿಜಯಪುರ, ಬಾಗಲಕೋಟೆ ಮತ್ತು ಹಾವೇರಿ ವೃತ್ತದ ವ್ಯಾಪ್ತಿಗಳಲ್ಲಿ ಖಾಲಿ ಇರುವ ಗ್ರಾಮ ವಿದ್ಯುತ್ ಪ್ರತಿನಿಧಿ (ಜಿವಿಪಿ ಮೈಕ್ರೋ ಫೀಲ್ಡರ್ ಫ್ರಾಂಚೈಸಿ) ಹುದ್ದೆಗಳನ್ನು ಕಾರ್ಯನಿರ್ವಹಣೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅಧಿಸೂಚನೆಗಳನ್ನು ಹೊರಡಿಸಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Application Start Date: 5 ಆಗಸ್ಟ್ 2021
Application End Date: 8 ಸೆಪ್ಟೆಂಬರ್ 2021
Work Location: ಶಿರಸಿ, ಹುಬ್ಬಳ್ಳಿ, ಬೆಳಗಾವಿ, ಚಿಕ್ಕೋಡಿ, ವಿಜಯಪುರ, ಬಾಗಲಕೋಟೆ ಮತ್ತು ಹಾವೇರಿ
Selection Procedure: - ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪಿಯುಸಿ ಅಥವ ತತ್ಸಮಾನ ವಿದ್ಯಾರ್ಹತೆಯಲ್ಲಿ ಪಡೆದಿರುವ ಗರಿಷ್ಠ ಅಂಕಗಳ ಅನ್ವಯ ಮೆರಿಟ್ ಆಧಾರದ ಮೇಲೆ 1:2 ರಂತೆ ಮೂಲ ದಾಖಲಾತಿಗಳ ಪರಿಶೀಲನೆ ನಡೆಸಿ ನೇಮಕ ಮಾಡಿಕೊಳ್ಳಲಾಗುವುದು.
Qualification: - ಗ್ರಾಮ ವಿದ್ಯುತ್ ಪ್ರತಿನಿಧಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪಿಯುಸಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು
Fee: - ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ರೂ 250 ಮೊತ್ತದ ಅರ್ಜಿ ಶುಲ್ಕವನ್ನು (ಡಿಡಿ) ಪಾವತಿಸಬೇಕು
Age Limit: - ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ವಯೋಮಿತಿ ಯೊಳಗಿನವರಾಗಿರಬೇಕು.
Pay Scale:
- ಗ್ರಾಮ ವಿದ್ಯುತ್ ಪ್ರತಿನಿಧಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪೆನಿ ನಿಗದಿಪಡಿಸಿದ ಶೇಕಡಾ 100 ರಷ್ಟು ಬಿಲ್ ವಿತರಣೆ ಮಾಡಿ, ಮಾಸಿಕ ಮೂಲ ಗುರಿಯನ್ನು ಸಾಧಿಸಿದ ₹ 12000 'ಕನಿಷ್ಠ ಪ್ರೋತ್ಸಾಹ ಧನ' ವನ್ನು ವೇತನವಾಗಿ ಪಡೆಯಲಿದ್ದಾರೆ.
* ಅರ್ಜಿ ನಮೂನೆಗಳು ಹಾಗೂ ಅಧಿಕೃತ ಅಧಿಸೂಚನೆಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಡೌನ್ ಲೋಡ್ ಮಾಡಿಕೊಂಡು ಮಾಹಿತಿ ಇನ್ನೂ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.





Comments