ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ಸರಕಾರದ ಸಂಪೂರ್ಣ ಸ್ವಾಮ್ಯಕ್ಕೆ ಒಳಪಟ್ಟಿರುವ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (HESCOM) ನಲ್ಲಿ ಖಾಲಿ ಇರುವ 248 ಶಿಶುಕ್ಷುಗಳ(ಅಪ್ರೆಂಟಿಸ್) ಆಯ್ಕೆಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16-09-2023 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿಯನ್ನು ಸಲ್ಲಿಸುವ ವಿಳಾಸ :
ಕಾರ್ಯನಿರ್ವಾಹಕ ಇಂಜಿನೀಯರರು(ವಿ), ಕೈಗಾರಿಕಾ ತರಬೇತಿ ಕೇಂದ್ರ(ITC), ಹೆಸ್ಕಾಂ, ವಿದ್ಯುತ್ ನಗರ, ಕಾರವಾರ ರಸ್ತೆ, ಹುಬ್ಬಳ್ಳಿ -24, ಇವರಿಗೆ ದಿನಾಂಕ: 16/09/2022ರ ಸಂಜೆ 4.00 ಘಂಟೆಯ ಒಳಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಕಳುಹಿಸಬಹುದಾಗಿದೆ .
* ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಲೆಕ್ಟ್ರೀಶಿಯನ್ ವೃತಿಯಲ್ಲಿ ವ್ಯಾಸಂಗ ಮಾಡಿ ಉತ್ತೀರ್ಣರಾಗಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
* SSLC ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಒಂದು ವಿಷಯವಾಗಿ ತೆಗೆದುಕೊಂಡಿದ್ದು ಮತ್ತು ಕನ್ನಡದಲ್ಲಿ ಓದಲು ಹಾಗೂ ಬರೆಯಲು ತಿಳಿದಿರಬೇಕು.
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
* ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ರೂ 50/- ಶುಲ್ಕವನ್ನು ಪಾವತಿಸಬೇಕು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ 26/08/2023ರ ಅನ್ವಯ ಕನಿಷ್ಠ 25 ವರ್ಷ ವಯೋಮಿತಿಯನ್ನು ಮೀರಿರಬಾರದು.
* ಪರಿಶಿಷ್ಟ ಜಾತಿ / ಪಂಗಡದ ಅಭ್ಯರ್ಥಿಗಳ ವಯಸ್ಸು 26/08/2023 ಕ್ಕೆ 30 ವರ್ಷ ವಯೋಮಿತಿಯನ್ನು ಮೀರಿರಬಾರದು .
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 7,000/- ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments