ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (HESCOM) ನಲ್ಲಿ ಖಾಲಿ ಇರುವ 200 ಗ್ರಾಜುಯೇಟ್ ಅಪ್ರೆಂಟಿಸ್ ಹಾಗೂ ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 30-01-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 200
ಗ್ರಾಜುವೇಟ್ ಅಪ್ರೆಂಟಿಸ್ - 175
ಡಿಪ್ಲೋಮಾ ಅಪ್ರೆಂಟಿಸ್ - 75
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ, ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ ನಡೆಸುವದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಡಿಪ್ಲೊಮಾ/ BE/ B.Tech ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 8,000/- ರಿಂದ 9,000/- ರೂ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments