Loading..!

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:15 ಆಗಸ್ಟ್ 2024
not found

ಕರ್ನಾಟಕ ಸರಕಾರದ ಸಂಪೂರ್ಣ ಸ್ವಾಮ್ಯಕ್ಕೆ ಒಳಪಟ್ಟಿರುವ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (HESCOM) ನಲ್ಲಿ ಖಾಲಿ ಇರುವ 338 ಶಿಶುಕ್ಷುಗಳ(ಅಪ್ರೆಂಟಿಸ್) ಆಯ್ಕೆಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳಿಗೆ ಒಂದು ವರ್ಷದ ವರೆಗೆ ಉದ್ಯೋಗ ತರಬೇತಿ ನೀಡಲಿದ್ದು ಜೊತೆಗೆ ಸ್ಟೈಪೆಂಡ್ ಕೂಡ ಕೊಡಲಾಗುತ್ತದೆ.  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  338
Application Start Date:  10 ಆಗಸ್ಟ್ 2024
Application End Date:  20 ಆಗಸ್ಟ್ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ದಾಖಲಾತಿ ಪರಿಶೀಲನೇ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 


ಹುದ್ದೆಗಳ ವಿವರ : 338 
BE (ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್) : 200
Diploma (ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್) : 138

Qualification: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು Diploma, BE, ವ್ಯಾಸಂಗ ಮಾಡಿ ಉತ್ತೀರ್ಣರಾಗಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. SSLC ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಒಂದು ವಿಷಯವಾಗಿ ತೆಗೆದುಕೊಂಡಿದ್ದು ಮತ್ತು ಕನ್ನಡದಲ್ಲಿ ಓದಲು ಹಾಗೂ ಬರೆಯಲು ತಿಳಿದಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಹುಬ್ಬಳ್ಳಿ, KA,
To Download Official Notification
Related Tags: Diploma Engineering

Comments