ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಖಾಲಿ ಇರುವ ವೈದ್ಯರು, ಪ್ರೋಗ್ರಾಮ್ ಮ್ಯಾನೇಜರ್, ಆಶಾ ಕೋಆರ್ಡಿನೇಟರ್, ನೇತ್ರ ಸಹಾಯಕರು, ಜಿಲ್ಲಾ ಅಕೌಂಟ್ ಮ್ಯಾನೇಜರ್ ಮತ್ತು ಶೂಶ್ರೋಷಾಧಿಕಾರಿಗಳು ಸೇರಿದಂತೆ ವಿವಿಧ ಹುದ್ದೆಗಳನ್ನು ಒಂದು ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ಭರ್ತಿಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 09/09/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ ಜಿಲ್ಲೆಯಲ್ಲಿ 91 ಕಿಂತ ಹೆಚ್ಚಿನ ಹುದ್ದೆಗಳು ಖಾಲಿ ಇವೆ .
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇತರೆ ಹುದ್ದೆಗಳಿಗೆ
* ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ - ರೂ. 200
* ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡ , ಪ್ರವರ್ಗ -1 ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ - ರೂ. 50 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ವೈದ್ಯಕೀಯ ಹುದ್ದೆಗಳಿಗೆ
* ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ - ರೂ. 500
* ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡ , ಪ್ರವರ್ಗ -1 ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ - ರೂ. 100 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments