Loading..!

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ
Published by: Yallamma G | Date:27 ಆಗಸ್ಟ್ 2022
not found

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಖಾಲಿ ಇರುವ ವೈದ್ಯರು, ಪ್ರೋಗ್ರಾಮ್ ಮ್ಯಾನೇಜರ್, ಆಶಾ ಕೋಆರ್ಡಿನೇಟರ್, ನೇತ್ರ ಸಹಾಯಕರು, ಜಿಲ್ಲಾ ಅಕೌಂಟ್ ಮ್ಯಾನೇಜರ್ ಮತ್ತು ಶೂಶ್ರೋಷಾಧಿಕಾರಿಗಳು ಸೇರಿದಂತೆ ವಿವಿಧ ಹುದ್ದೆಗಳನ್ನು ಒಂದು ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ಭರ್ತಿಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 09/09/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ ಜಿಲ್ಲೆಯಲ್ಲಿ 91 ಕಿಂತ ಹೆಚ್ಚಿನ ಹುದ್ದೆಗಳು  ಖಾಲಿ ಇವೆ .
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ. 

No. of posts:  91
Application Start Date:  27 ಆಗಸ್ಟ್ 2022
Application End Date:  9 ಸೆಪ್ಟೆಂಬರ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಳು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಪಡೆದಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇತರೆ ಹುದ್ದೆಗಳಿಗೆ 
* ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ - ರೂ. 200
* ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡ , ಪ್ರವರ್ಗ -1 ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ - ರೂ. 50 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. 
ವೈದ್ಯಕೀಯ ಹುದ್ದೆಗಳಿಗೆ 
* ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ - ರೂ. 500
* ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡ , ಪ್ರವರ್ಗ -1 ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ - ರೂ. 100 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಳಗಾವಿ ಜಿಲ್ಲೆ, KA,
To Download Official Notification

Comments