ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ

ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಖಾಲಿ ಇರುವ 18 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ 07/05/2022ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಒಟ್ಟು ಹುದ್ದೆಗಳ ವಿವರ:
* ಸಿವಿಲ್ ಇಂಜಿನಿಯರ್ -05
* ಭೂ ವಿಜ್ಞಾನಿ - 10 ಮತ್ತು
* ಅಕೌಂಟ್ಸ್ ಅಧಿಕಾರಿ - 03
ನೇರ ಸಂದರ್ಶನ ನಡೆಯುವ ಸ್ಥಳ :
Hutti Gold Mines Company Limited,
Company Administrative Office, Hutti - 584115,
Raichur District, Karnataka
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು B.E/ B.Tech/ M.Tech/ M.Sc/ MCom/ MBA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.
* ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಗರಿಷ್ಟ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
* ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 30,000/- ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments