ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನಂತೆ ವಿದ್ಯಾರ್ಹತೆಯನ್ನ ಹೊಂದಿರಬೇಕು.
1) ಸ್ಟಾಫ್ ನರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿಯೊಂದಿಗೆ ಸಾಮಾನ್ಯ ಡಿಪ್ಲೊಮಾದಲ್ಲಿ ನರ್ಸಿಂಗ್ ಪದವಿ ಹೊಂದಿರಬೇಕು ಮತ್ತು ಸೂಲಗಿತ್ತಿಯಾಗಿ 3 ವರ್ಷಗಳ ಅನುಭವವನ್ನು ಹೊಂದಿರಬೇಕು.
2) ಫಿಸಿಯೋಥೆರಪಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು PUC(PCB) ಜೊತೆಗೆ ಭೌತಚಿಕಿತ್ಸೆಯಲ್ಲಿ ಡಿಪ್ಲೊಮಾ ಪದವಿ ಹೊಂದಿರಬೇಕು ಜೊತೆಗೆ 2 ವರ್ಷಗಳ ಅನುಭವವನ್ನು ಹೊಂದಿರಬೇಕು.
3) ಫಾರ್ಮಾಸಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು PUC(PCB) ಜೊತೆಗೆ ಡಿ'ಫಾರ್ಮಾ ಪದವಿ ಹೊಂದಿರಬೇಕು ಜೊತೆಗೆ 2 ವರ್ಷಗಳ ಅನುಭವವನ್ನು ಹೊಂದಿರಬೇಕು.
4) ಡ್ರೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಜೊತೆಗೆ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಿಂದ ಅಥವಾ ಸೇಂಟ್ ಜಾನ್ಸ್ ಆಂಬ್ಯುಲೆನ್ಸ್ ಸಂಘ ಅಥವಾ ಅಂತಹುದೇ ಮಾನ್ಯತೆ ಪಡೆದ ಸಂಸ್ಥೆಯಿಂದ ಪ್ರಥಮ ಚಿಕಿತ್ಸೆಯಲ್ಲಿ ತರಬೇತಿಯ ಪ್ರಮಾಣಪತ್ರವನ್ನು ಹೊಂದಿರಬೇಕು.
ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿನ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಮತ್ತು
SC/ST/PH ಅಭ್ಯರ್ಥಿಗಳು ಶುಲ್ಕದಿಂದ ವಿನಾಯಿತಿ ಹೊಂದಿರುತ್ತಾರೆ.
ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿನ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಪ್ರತಿ ತಿಂಗಳಿಗೆ 35,555/- ರಿಂದ 37,383/-ರೂಗಳ ವೇತನವನ್ನು ಪಡೆಯುವರು.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ





Comments