ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (HPCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (HPCL) ನಲ್ಲಿ ಖಾಲಿ ಇರುವ ಗ್ರ್ಯಾಜುಯೆಟ್ ಅಪ್ರೆಂಟಿಸ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ13 ಜನವರಿ 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯಗಳಿಂದ ಯಾವುದೇ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭಾವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC-NC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD ಅಭ್ಯರ್ಥಿಗಳು: 10 ವರ್ಷಗಳು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 25,000/- ರೂ ಗಳ ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ. '
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments