HPCL ರಾಜಸ್ಥಾನ ರಿಫೈನರಿ ಲಿಮಿಟೆಡ್ (HRRL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

HPCL ರಾಜಸ್ಥಾನ ರಿಫೈನರಿ ಲಿಮಿಟೆಡ್ (HRRL) ನಲ್ಲಿ ಖಾಲಿ ಇರುವ 121 ಜೂನಿಯರ್ ಎಸ್ಎಕ್ಯುಟಿವ್, ಇಂಜಿನಿಯರ್, ಆಫೀಸರ್, ಸೀನಿಯರ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT), ಗುಂಪು ಕಾರ್ಯ/ಗುಂಪು ಚರ್ಚೆ, ಕೌಶಲ್ಯ ಪರೀಕ್ಷೆ, ವೈಯಕ್ತಿಕ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 08 ಫೆಬ್ರುವರಿ 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 121
ಜೂನಿಯರ್ ಎಸ್ಎಕ್ಯುಟಿವ್ - 80
ಇಂಜಿನಿಯರ್ - 6
ಆಫೀಸರ್ - 1
ಸೀನಿಯರ್ ಇಂಜಿನಿಯರ್ - 11
ಸೀನಿಯರ್ ಮ್ಯಾನೇಜರ್ - 23
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯಗಳಿಂದ B.E / B.Tech /MCS/ MBA / ಡಿಪ್ಲೋಮ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭಾವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು 1180/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಮಹಿಳೆಯರು ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ :
OBCNCL ಅಭ್ಯರ್ಥಿಗಳಿಗೆ : 03 ವರ್ಷ
SC/ST ಅಭ್ಯರ್ಥಿಗಳಿಗೆ : 05 ವರ್ಷ
PwBD (UR) ಅಭ್ಯರ್ಥಿಗಳಿಗೆ : 10 ವರ್ಷ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 30,000/- ರೂ ಗಳಿಂದ 2,20,000 /- ರೂ ಗಳ ವರೆಗೆ ಮಾಸಿಕ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments