ಹುಬ್ಬಳಿಯ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಖಾಲಿ ಇರುವ ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಹುಬ್ಬಳ್ಳಿ ಆಯುರ್ವೇದ ಸೇವಾ ಸಮಿತಿಯ ಅನುದಾನಿತ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕರು, ಬೆರಳಚ್ಚುಗಾರರು, ಸ್ಟಾಫ್ ನರ್ಸ್, ANM ನರ್ಸ್, ಅಟೆಂಡರ್, ವಾರ್ಡ್ ಆಯಾ ಮತ್ತು ಫಾರ್ಮಸಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆಯನ್ನು ಈ ಕೆಳೆಗೆ ನೀಡಲಾಗಿದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 03/10/2024 ದೊಳಗಾಗಿ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
ಹುಬ್ಬಳ್ಳಿ ಆಯುರ್ವೇದ ಸೇವಾ ಸಮಿತಿಯ ಅನುದಾನಿತ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹುಬ್ಬಳ್ಳಿಯ ಕಾರ್ಯಾಲಯದಿಂದ ಅರ್ಜಿಗಳನ್ನು ನಿಗದಿತ ಶುಲ್ಕವನ್ನು ಪಾವತಿಸಿ ದ್ವಿ ಪ್ರತಿಯಲ್ಲಿ ಪಡೆದು ಒಂದು ಅರ್ಜಿಯನ್ನು ಪ್ರಾಚಾರ್ಯರು ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹೆಣ್ಣಿರಿ ಬಡಾವಣೆ ಹುಬ್ಬಳ್ಳಿ -580024 ಇವರಿಗೆ ಇನ್ನೊಂದು ಅರ್ಜಿಯನ್ನು ಆಯುಕ್ತರು ಆಯುಷ್ ಇಲಾಖೆ ಧನ್ವಂತರಿ ರಸ್ತೆ ಬೆಂಗಳೂರು-560009 ಸಲ್ಲಿಸಬೇಕು.
ಹುದ್ದೆಗಳ ವಿವರ : 13
ದ್ವಿತೀಯ ದರ್ಜೆ ಸಹಾಯಕರು : 2
ಬೆರಳಚ್ಚುಗಾರರು : 2
ಸ್ಟಾಫ್ ನರ್ಸ್ : 2
ಎ.ಎನ್.ಎಂ ನರ್ಸ್: 1
ಫಾರ್ಮಾಸಿಸ್ಟ್ : 2
ಲ್ಯಾಬೋರೇಟರಿ ಟೆಕ್ನಿಶಿಯನ್ : 1
ಅಟೆಂಡರ್ : 1
ಸ್ಯಾನಿಟರಿ ವರ್ಕರ್ : 1
ವಾರ್ಡ ಆಯಾ : 1
ಗ್ರೂಪ್-ಸಿ ಹುದ್ದೆಗಳಿಗೆ : 1000/-ರೂ
ಗ್ರೂಪ್-ಡಿ ಹುದ್ದೆಗಳಿಗೆ : 600/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments