ಹಾಸನ ವಿಶ್ವವಿದ್ಯಾಲಯ ಹೇಮಗಂಗೋತ್ರಿ ಹಾಸನದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಹಾಸನ ವಿಶ್ವವಿದ್ಯಾಲಯ ಹೇಮಗಂಗೋತ್ರಿ ಹಾಸನದಲ್ಲಿ ಖಾಲಿ ಇರುವ ಎಂ.ಎಸ್ಸಿ ರಸಾಯನ ಶಾಸ್ತ್ರ, ಎಂ.ಎಸ್ಸಿ ಗಣಿತ ವಿಜ್ಞಾನ (ಕಂಪ್ಯೂಟರ್ ಸೈನ್ಸ್) ಎಂ.ಎಸ್.ಡಬ್ಲ್ಯೂ (ಸಮಾಜಕಾರ್ಯ) ವಿಭಾಗಗಳಿಗೆ ಅತಿಥಿ ಉಪನ್ಯಾಸಕರ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ23/11/2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ನಾತಕೋತ್ತರ ಪದವಿ M.sc/ MSW ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು
*ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 500/- ಅರ್ಜಿ ಶುಲ್ಕ
* ಪ್ರವರ್ಗ - 1/ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ರೂ. 250/- ಅರ್ಜಿ ಶುಲ್ಕ ಇರುತ್ತದೆ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ಗೌರವಧನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments