ಹಿಂದುಸ್ತಾನ್ ಉರ್ವಾರಕ್ ಮತ್ತು ರಸಾಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಿಂದುಸ್ತಾನ್ ಉರ್ವಾರಕ್ ಮತ್ತು ರಸಾಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ390 ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯದಿನಾಂಕ 24/05/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಒಟ್ಟು ಹುದ್ದೆಗಳ ವಿವರ: 390
ಜೂನಿಯರ್ ಇಂಜಿನಿಯರ್ ಅಸಿಸ್ಟಂಟ್ : 132
ಇಂಜಿನಿಯರ್ ಅಸಿಸ್ಟಂಟ್ : 123
ಜೂನಿಯರ್ ಸ್ಟೋರ್ ಅಸಿಸ್ಟಂಟ್ : 03
ಸ್ಟೋರ್ ಅಸಿಸ್ಟಂಟ್ : 09
ಜೂನಿಯರ್ ಲ್ಯಾಬ್ ಅಸಿಸ್ಟಂಟ್: 18
ಲ್ಯಾಬ್ ಅಸಿಸ್ಟಂಟ್: 18
ಜೂನಿಯರ್ ಕ್ವಾಲಿಟಿ ಅಸಿಸ್ಟಂಟ್: 06
ಕ್ವಾಲಿಟಿ ಅಸಿಸ್ಟಂಟ್ : 06
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಹುದ್ದೆಗಳಿಗನುಗುಣವಾಗಿ Diploma/ BA/ B.Sc/ B.Com ವಿದ್ಯಾರ್ಹತೆಯನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 30 / 35 /40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments