ಹಿಂದುಸ್ತಾನ್ ಉರ್ವಾರಕ್ ಮತ್ತು ರಸಾಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅಜಿ ಸಲ್ಲಿಸಿ

ಹಿಂದುಸ್ತಾನ್ ಉರ್ವಾರಕ್ ಮತ್ತು ರಸಾಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 51 ವೈಸ್ ಪ್ರೆಸಿಡೆಂಟ್ ಪ್ರೊಡಕ್ಷನ್/ಒಪೆರಷನ್ಸ್, ಇಂಜಿನಿಯರ್ ಕೆಮಿಕಲ್ (ಅಮೋನಿಯಾ), ಇಂಜಿನಿಯರ್ ಮೆಕ್ಯಾನಿಕಲ್, ಮ್ಯಾನೇಜರ್ ಫೈನಾನ್ಸ್, ಡೆಪ್ಯುಟಿ ಮ್ಯಾನೇಜರ್ ಫೈನಾನ್ಸ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಫೈನಾನ್ಸ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿಯ ನಿಯಮಾನುಸಾರವಾಗಿ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ29 ಜನವರಿ 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ CA, CMA, MBA ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 53 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 40,000/- ರೂ ಗಳಿಂದ 1,50,000/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments