ಕರ್ನಾಟಕ ಸರ್ಕಾರದ ಅಧೀನ ಉದ್ದಿಮೆ ಹಟ್ಟಿ ಚಿನ್ನದ ಗಣಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಈ ಕುರಿತ ಮಾಹಿತಿ ನಿಮಗಾಗಿ

ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಒಂದು ಉದ್ದಿಮೆಯಾಗಿರುವ ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಇಲ್ಲಿ ಖಾಲಿ ಇರುವ157 ಸಹಾಯಕ ಎಲೆಕ್ಟ್ರಿಕಲ್, ಲ್ಯಾಬ್ ಸಹಾಯಕ, ಭಾದ್ರತಾ ನಿರೀಕ್ಷಕರು, ಫಿಟ್ಟರ್, ಎಲೆಕ್ಟ್ರಿಷನ್ ಮತ್ತು ಸೆಕ್ಯೂರಿಟಿ ಗಾರ್ಡ್ ಸೇರಿದಂತೆ ವಿವಿಧ ವರ್ಗದ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಲು ನಿಗದಿಪಡಿಸಿರುವ ಶೈಕ್ಷಣಿಕ ವಿದ್ಯಾರ್ಹತೆ ಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಕೆಯು ದಿನಾಂಕ 19/03/2024 ದಿಂದ ಪ್ರಾರಂಭಗೊಂಡು ದಿನಾಂಕ03/05/2024 ಕೊನೆಗೊಳ್ಳುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
-ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಇಲ್ಲಿ ಖಾಲಿ ಇರುವ 157 ವಿವಿಧ ಹುದ್ದೆಗಳ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 30/05/2024 ರ ವರೆಗೆ ವಿಸ್ತರಿಸಲಾಗಿದೆ.
ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರವಾಗಿ ಮಾಸಿಕ ವೇತನ ನಿಗದಿಪಡಿಸಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments