ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ 462 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್ (ICAR) ನಿಂದ ಹಣಕಾಸು ಮತ್ತು ಆಡಳಿತವನ್ನು ಹೊಂದಿರುವ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (IARI)ಯಲ್ಲಿ ಖಾಲಿ ಇರುವ 462 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 01/06/2022 ರೊಳಗೆ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದು.
ಹುದ್ದೆಗಳ ವಿವರ:
* ಪ್ರದಾನ ಕಚೇರಿಯಲ್ಲಿ - 71 ಹುದ್ದೆಗಳು
* ಸಂಶೋಧನಾ ಸಂಸ್ಥೆಯಲ್ಲಿ - 391 ಹುದ್ದೆಗಳು
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಪೂರ್ವಭಾವಿ ಪರೀಕ್ಷೆಯನ್ನು ನಡೆಸಲಾಗುವುದು. ಈ ಎರಡು ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಮುಖ್ಯ ಪರೀಕ್ಷೆಗೆ ಆಹ್ವಾನಿಸಲಾಗಿವುದು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ. 1200/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
* SC/ST, ಅಂಗವಿಕಲ ಹಾಗೂ ಮಹಿಳಾ ಅಭ್ಯರ್ಥಿಗಳು ರೂ. 500/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
* ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಮತ್ತು ಗರಿಷ್ಟ 30 ವರ್ಷ ವಯೋಮಿತಿ ಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. * ICAR ಅಭ್ಯರ್ಥಿಗಳಿಗೆ 45 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 7ನೇ ವೇತನ ಆಯೋಗದ ಅನ್ವಯ 6ನೇ ಹಂತದ ವೇತನವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments