Loading..!

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ (IBPS) ನಿಂದ ಒಟ್ಟು 1828 ವಿಶೇಷ ಅಧಿಕಾರಿ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
Published by: Mallappa Myageri | Date:6 ನವೆಂಬರ್ 2021
not found
ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ ನಿಂದ 1828 ವಿಶೇಷ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಪ್ರಕಟಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ: 03-11-2021 ರಿಂದ 23-11-2021 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲಿಸಲು ಕೋರಲಾಗಿದೆ.
No. of posts:  1828
Application Start Date:  3 ನವೆಂಬರ್ 2021
Application End Date:  23 ನವೆಂಬರ್ 2021
Last Date for Payment:  23 ನವೆಂಬರ್ 2021
Work Location:  Across India
Selection Procedure: ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಆನ್ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ನಡೆಸಲಾಗುವುದು ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್ಲೈನ್ ಮುಖ್ಯ ಪರೀಕ್ಷೆ ಎದುರಿಸಲು ಅರ್ಹರಾಗಿರುತ್ತಾರೆ. ನಂತರ ನೇರ ಸಂದರ್ಶನ ಮತ್ತು ದಾಖಲೆ ಪರಿಶೀಲನೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹುದ್ದೆಗೆ ಸಂಬಂಧಪಟ್ಟ ವಿಷಯದಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು LLB ವಿದ್ಯಾರ್ಹತೆಯನ್ನು ಪಡೆದಿರಬೇಕು.
Fee:
ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 850/-ರೂ 

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಂಗವಿಕಲ ಮತ್ತು ಮಾಜಿಸೈನಿಕ ಅಭ್ಯರ್ಥಿಗಳು 175/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.
Age Limit:

ಅಭ್ಯರ್ಥಿಗಳು 01-11-2021 ರ ಅನ್ವಯ 
ಸಾಮಾನ್ಯ ಅಭ್ಯರ್ಥಿಗಳು ಕನಿಷ್ಟ 20 ವರ್ಷ ಗರಿಷ್ಟ 30 ವರ್ಷ, 
OBC ಅಭ್ಯರ್ಥಿಗಳು ಕನಿಷ್ಟ 20 ವರ್ಷ ಗರಿಷ್ಟ 33 ವರ್ಷ, 
SC / ST ಅಭ್ಯರ್ಥಿಗಳು ಕನಿಷ್ಟ 20 ವರ್ಷ ಗರಿಷ್ಟ 35 ವರ್ಷ, 
EX-ARMY ಅಭ್ಯರ್ಥಿಗಳು ಕನಿಷ್ಟ 20 ವರ್ಷ ಗರಿಷ್ಟ 35 ವರ್ಷ ಮತ್ತು 
ಅಂಗವಿಕಲ ಅಭ್ಯರ್ಥಿಗಳಿಗೆ ಕನಿಷ್ಟ 20 ವರ್ಷ ಗರಿಷ್ಟ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.

To Download the official notification

Comments