Loading..!

IBPS ನಿಂದ ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವ ಸುಮಾರು 12,075 ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
| Date:13 ಸೆಪ್ಟೆಂಬರ್ 2019
not found
ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (IBPS) 17 ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕ್ಲರಿಕಲ್ ಕೇಡರ್ ಹುದ್ದೆಗಳ ನೇಮಕಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ದಿನಾಂಕ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 09 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಒದಗಿಸಲಾಗಿದೆ.

ಪ್ರಸ್ತುತ ಈ ಅಧಿಸೂಚನೆಯಲ್ಲಿ ಒಟ್ಟು 12075 ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದು ರಾಜ್ಯದಲ್ಲಿ ಸುಮಾರು 953 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳ ಪೈಕಿ ರಾಜ್ಯ ಮೂಲದ ಕೆನರಾ ಬ್ಯಾಂಕ್ ಇಲ್ಲಿ 445 ಹಾಗೂ ಕಾರ್ಪೋರೇಷನ್ ಬ್ಯಾಂಕ್ ಇಲ್ಲಿ 224 ಹುದ್ದೆಗಳ ನೇಮಕ ಮಾಡಿಕೊಳ್ಳುತ್ತದೆ. ಗ್ರಾಮೀಣ ಬ್ಯಾಂಕುಗಳಲ್ಲಿನ ಹುದ್ದೆಗಳಿಗೆ ಮುಖ್ಯ ಪರೀಕ್ಷೆಯನ್ನು ಕನ್ನಡದಲ್ಲಿಯೇ ನಡೆಸಲು ಐಬಿಪಿಎಸ್ ತೀರ್ಮಾನಿಸಿದ್ದ ಹಿನ್ನೆಲೆಯಲ್ಲಿ ಕ್ಲರ್ಕ್ ಹುದ್ದೆಗಳಿಗೂ ಕನ್ನಡದಲ್ಲಿಯೇ ಪರೀಕ್ಷೆ ನಡೆಯಲಿದೆ ಎಂದೇ ಎಲ್ಲರೂ ಭಾವಿಸಿದ್ದರು, ಆದರೆ ಪರೀಕ್ಷೆ ನಡೆಯುವ ಭಾಷೆಯಲ್ಲಿ ಯಾವುದೇ ಬದಲಾವಣೆಯನ್ನು IBPS ಮಾಡಿಲ್ಲ ಈ ಹಿಂದಿನಂತೆಯೇ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಪರೀಕ್ಷೆ ನಡೆಸಲು ಅವಕಾಶ ನೀಡಿದೆ ಇದರಿಂದ ಕನ್ನಡ ಅಭ್ಯರ್ಥಿಗಳಿಗೆ ತುಸು ಬೇಸರ ಉಂಟಾಗಿದೆ.

* ಕರ್ನಾಟಕ ರಾಜ್ಯದಲ್ಲಿನ ಪರೀಕ್ಷಾ ಕೇಂದ್ರಗಳು : ಬೆಳಗಾವಿ, ಬೆಂಗಳೂರು, ಬೀದರ್, ದಾವಣಗೆರೆ, ಧಾರವಾಡ, ಹಾಸನ, ಮಂಡ್ಯ, ಕಲಬುರಗಿ, ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ.
* ಮುಖ್ಯ ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಮಂಗಳೂರು ಹಾಗೂ ಹುಬ್ಬಳ್ಳಿ.
No. of posts:  12075
Application Start Date:  17 ಸೆಪ್ಟೆಂಬರ್ 2019
Application End Date:  9 ಅಕ್ಟೋಬರ್ 2019
Last Date for Payment:  9 ಅಕ್ಟೋಬರ್ 2019
Work Location:  Across India
Qualification: ಈ ಕ್ಲರಿಕಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರೂ ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯವಾಗಿದೆ. ಆದ್ದರಿಂದ ಕಂಪ್ಯೂಟರ್ ಕಲಿಕೆಯ ಬಗ್ಗೆ ದೃಢೀಕರಣ ಪತ್ರವನ್ನು ಕೂಡ ಅಭ್ಯರ್ಥಿಯು ಹೊಂದಿರಬೇಕಾಗುತ್ತದೆ.
Fee: ಅರ್ಜಿ ಸಲ್ಲಿಸಲು SC, ST, ವಿಕಲಚೇತನ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂಪಾಯಿ 100 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ ಹಾಗೂ ಉಳಿದ ಎಲ್ಲ ಸಾಮಾನ್ಯ ಅಭ್ಯರ್ಥಿಗಳಿಗೆ ರೂಪಾಯಿ 600 ಪರೀಕ್ಷಾ ಶುಲ್ಕವನ್ನು ನಿಗದಿಪಡಿಸಲಾಗಿದ್ದು ಇದು ಜಿಎಸ್ಟಿ ಶುಲ್ಕವನ್ನು ಒಳಗೊಂಡಿರುತ್ತದೆ.
* ಶುಲ್ಕವನ್ನು ಆನ್ಲೈನ್ ನಲ್ಲಿ ಮಾತ್ರವೇ ಸಲ್ಲಿಸಲು ಅವಕಾಶ ನೀಡಲಾಗಿದೆ
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 20 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿ 28 ವರ್ಷಕ್ಕೆ ನಿಗದಿಪಡಿಸಲಾಗಿದೆ. ವಿವಿಧ ಮೀಸಲಾತಿಗಳಿಗೆ ಸರ್ಕಾರಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದ್ದು ಈ ಕುರಿತ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸತಕ್ಕದ್ದು.

** ವಿಶೇಷ ಸೂಚನೆ: ಮೀಸಲಾತಿ ವ್ಯಾಪ್ತಿಗೆ ಬರುವ SC, ST, ಅಲ್ಪಸಂಖ್ಯಾತರು ಎಕ್ಸ್ ಸರ್ವಿಸ್ ಮೆನ್ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುತ್ತದೆ. ರಾಜ್ಯದಲ್ಲಿ ಬೆಂಗಳೂರು, ಕಲಬುರಗಿ, ಹುಬ್ಬಳ್ಳಿ, ಮಂಗಳೂರು ಹಾಗೂ ಮೈಸೂರಿನಲ್ಲಿ ಈ ತರಬೇತಿ ನೀಡಲಾಗುತ್ತದೆ. ಈ ಸೌಲಭ್ಯ ಪಡೆಯಲು ಇಚ್ಛಿಸುವವರು ಅರ್ಜಿ ಸಲ್ಲಿಸುವಾಗ ತರಬೇತಿ ಪಡೆಯುವ ಬಗ್ಗೆ ನಮೂದಿಸಬೇಕು. ಈ ತರಬೇತಿಯು ನೆವೆಂಬೆರ್ 25 ರಿಂದ ನವೆಂಬರ್ 30 ರ ತನಕ ನಡೆಯುತ್ತದೆ. ಈ ಕುರಿತ ಸಂಪೂರ್ಣ ಮಾಹಿತಿ ಅಧಿಸೂಚನೆಯಲ್ಲಿ ಲಭ್ಯವಿದೆ.

* ಅರ್ಜಿ ಸಲ್ಲಿಸುವ ಆನ್ಲೈನ್ ಲಿಂಕ್ ಅನ್ನು ದಿನಾಂಕ ಸೆಪ್ಟೆಂಬರ್ 17 ರಿಂದ ಪೂರೈಸಲಾಗುವದು
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ

Comments