ಭಾರತೀಯ ಬ್ಯಾಂಕಿಂಗ್ ಸಿಬ್ಬಂಧಿ ಆಯ್ಕೆ ಪ್ರಾಧಿಕಾರ (IBPS)ದಿಂದ 7855 CRP ಕ್ಲರ್ಕ್ ಹುದ್ದೆಗಳ ಬೃಹತ್ ನೇಮಕಾತಿ

ಭಾರತೀಯ ಬ್ಯಾಂಕಿಂಗ್ ಸಿಬ್ಬಂಧಿ ಆಯ್ಕೆ ಪ್ರಾಧಿಕಾರ (IBPS) ದಿಂದ ಒಟ್ಟು 7855 CRP XI ಕ್ಲರ್ಕ್ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ಮೊದಲೇ ಈ ಅಧಿಸೂಚನೆ ಹೊರಡಿಸಿದ್ದು, ಜುಲೈ 12 ರಿಂದ ಆಗಸ್ಟ್ 1,2021ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತಾದರೂ, ಇದೀಗ ಪುನಃ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆಗೊಳಿಸಿ ಅರ್ಜಿ ಆಹ್ವಾನಿಸಲಾಗಿದೆ.
* ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಕರ್ನಾಟಕದ ಅಭ್ಯರ್ಥಿಗಳಿಗೆ ಕನ್ನಡದಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.
IBPS CRP ಕ್ಲರ್ಕ್-XI ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಾಮಾನ್ಯ ಲಿಖಿತ ಪರೀಕ್ಷೆಮೂಲಕ ಆಯ್ಕೆ ಮಾಡಲಾಗುತ್ತದೆ.
ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಪಡೆದಿರಬೇಕು. ಅಥವಾ ಯಾವುದೇ ಪದವಿಗೆ ಸಮಾನ ಅರ್ಹತೆಯ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಸಾಮಾನ್ಯ ಅಭ್ಯರ್ಥಿಗಳಿಗೆ: ರೂ. 850/-
SC/ST/PWD/EXSM ಅಭ್ಯರ್ಥಿಗಳಿಗೆ: ರೂ. 175/-
ಕನಿಷ್ಠ ವಯಸ್ಸು: 20 ವರ್ಷಗಳು
ಗರಿಷ್ಠ ವಯಸ್ಸು: 28 ವರ್ಷಗಳು
ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯವಾಗುತ್ತದೆ.
ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಳ್ಳಿ





Comments