IBPS ನಿಂದ ದೇಶದ ವಿವಿಧ ರಾಜ್ಯಗಳ ಬ್ಯಾಂಕುಗಳಲ್ಲಿ ಖಾಲಿ ಇರುವ 2557 ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

IBPS ನಿಂದ ದೇಶದ ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವ ಒಟ್ಟು 2557 ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು 06-11-2020 ಕೊನೆಯ ದಿನಾಂಕವಾಗಿದೆ.
*ಹುದ್ದೆಯ ವಿವರ :
- ಕ್ಲರ್ಕ್ ಹುದ್ದೆ - 2557
* ಈ ಹುದ್ದೆಗಳಿಗೆ ಈಗಾಗಲೇ ಅರ್ಜಿ ಆಹ್ವಾನಿಸಲಾಗಿತ್ತು ಹಾಗೂ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ದಿನಾಂಕ 23 ಸೆಪ್ಟೆಂಬರ್ 2020 ರಂದು ಕೊನೆಗೊಂಡಿತ್ತು. ಇದೀಗ ಮತ್ತೊಮ್ಮೆ ಅಭ್ಯರ್ಥಿಗಳಿಗೆ ಸಲ್ಲಿಸಿದ ಅರ್ಜಿಯನ್ನು ತಿದ್ದುಪಡಿ ಮಾಡಲು ಹಾಗೂ ಹೊಸ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿ ಅಧಿಸೂಚನೆ ಪ್ರಕಟಿಸಲಾಗಿದೆ.
- ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿಯನ್ನು ಹೊಂದಿರಬೇಕು.
- ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ, ಅಂದರೆ ಅಭ್ಯರ್ಥಿಗಳು ಕಂಪ್ಯೂಟರ್ ಕಾರ್ಯಾಚರಣೆಗಳಲ್ಲಿ ಪ್ರಮಾಣಪತ್ರ / ಡಿಪ್ಲೊಮಾ / ಪದವಿ ಹೊಂದಿರಬೇಕು / ಭಾಷೆ / ಕಂಪ್ಯೂಟರ್ / ಮಾಹಿತಿ ಅಧ್ಯಯನ ಮಾಡಿರಬೇಕು.
- ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಬಿಡಿ /ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 175/- (ಜಿಎಸ್‌ಟಿ ಸೇರಿದಂತೆ).
- ಉಳಿದ ವರ್ಗದ ಅಭ್ಯರ್ಥಿಗಳಿಗೆ ರೂ 850 / - (ಜಿಎಸ್‌ಟಿ ಸೇರಿದಂತೆ)
ವಯಸ್ಸು (01.09.2020 ರಂತೆ):
ಕನಿಷ್ಠ : 20 ವರ್ಷ ವಯಸ್ಸನ್ನು ಹೊಂದಿರಬೇಕು
ಗರಿಷ್ಠ : 28 ವರ್ಷ ವಯಸ್ಸನ್ನು ಮೀರಿರಬಾರದು.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿ ಬೇಕಾದ್ದಲ್ಲಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನಲೋಡ್ ಮಾಡಿಕೊಳ್ಳಿ.





Comments