ಗ್ರಾಮೀಣ ಬ್ಯಾಂಕ್ ಗಳಲ್ಲಿ ಖಾಲಿ ಇರುವ 8106 ಭರ್ಜರಿ ಹುದ್ದೆಗಳಿಗೆ ಪದವಿ ಪಾಸಾದವರಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಭಾರತ ಸರ್ಕಾರದ ಹಣಕಾಸು ಸಚಿವಾಲಯದ ಮಾಲೀಕತ್ವದ ಅಡಿಯಲ್ಲಿರುವ ಗ್ರಾಮೀಣ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಆಫೀಸ್ ಅಸಿಸ್ಟಂಟ್ ಮತ್ತು ಆಫೀಸರ್ ಸ್ಕೇಲ್ 8106 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 27/06/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕದಲ್ಲಿಯು ಇರುವ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಒಟ್ಟು ಹುದ್ದೆಗಳ ವಿವರ: 8106
* ಆಫೀಸ್ ಅಸಿಸ್ಟೆಂಟ್ ( ಮಲ್ಟಿಪರ್ಪಸ್ ) : 4,483
* ಆಫೀಸರ್ ಸ್ಕೇಲ್ I : 2,676
* ಆಫೀಸರ್ ಸೈಲ್ II : 947
* ಕರ್ನಾಟಕದಲ್ಲಿರುವ ಹುದ್ದೆಗಳ ವಿವರ
• ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್)
- ಕರ್ನಾಟಕ ಗ್ರಾಮೀಣ್ ಬ್ಯಾಂಕ್ : 104
- ಕರ್ನಾಟಕ ವಿಕಾಸ್ ಗ್ರಾಮೀಣ ಬ್ಯಾಂಕ್ : 69
• ಆಫೀಸರ್ ಸ್ಕೇಲ್ I
- ಕರ್ನಾಟಕ ಗ್ರಾಮೀಣ್ ಬ್ಯಾಂಕ್ : 231
- ಕರ್ನಾಟಕ ವಿಕಾಸ್ ಗ್ರಾಮೀಣ ಬ್ಯಾಂಕ್ : 198
• ಆಫೀಸರ್ ಸ್ಟೇಲ್ II : ಜನರಲ್ ಬ್ಯಾಂಕಿಂಗ್ ಆಫೀಸರ್
- ಕರ್ನಾಟಕ ಗ್ರಾಮೀಣ್ ಬ್ಯಾಂಕ್ : 151
- ಕರ್ನಾಟಕ ವಿಕಾಸ್ ಗ್ರಾಮೀಣ ಬ್ಯಾಂಕ್ : 79
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್‌ಲೈನ್ ಪರೀಕ್ಷೆ (ಪ್ರಿಲಿಮಿನರಿ, ಮುಖ್ಯ ಪರೀಕ್ಷೆ) ಮತ್ತು ಸಂದರ್ಶನವನ್ನು ನಡೆಸುವ ಮೂಲಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
* ಆಯಾ ರಾಜ್ಯಗಳ ಭಾಷೆಗಳಲ್ಲಿ ಪ್ರಶ್ನೆ ಪತ್ರಿಕೆ ಇರಲಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಿಎ / ಬ್ಯಾಚುಲರ್ ಡಿಗ್ರಿ/ ಎಂಬಿಎ ಹಾಗೂ ಸಂಬಂಧಿಸಿದ ವಿಷಯದಲ್ಲಿ ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
* ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು
* ಸಾಮಾನ್ಯ, ಮತ್ತು OBC ವರ್ಗದ ಅಭ್ಯರ್ಥಿಗಳಿಗೆ ರೂ.850. ಹಾಗೂ
* SC/ ST/ PWD ಅಭ್ಯರ್ಥಿಗಳಿಗೆ ರೂ.175.ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments