Loading..!

ಗ್ರಾಮೀಣ ಬ್ಯಾಂಕ್ ಗಳಲ್ಲಿ ಖಾಲಿ ಇರುವ 8106 ಭರ್ಜರಿ ಹುದ್ದೆಗಳಿಗೆ ಪದವಿ ಪಾಸಾದವರಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Savita Halli | Date:8 ಜೂನ್ 2022
not found

ಭಾರತ ಸರ್ಕಾರದ ಹಣಕಾಸು ಸಚಿವಾಲಯದ ಮಾಲೀಕತ್ವದ ಅಡಿಯಲ್ಲಿರುವ ಗ್ರಾಮೀಣ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಆಫೀಸ್ ಅಸಿಸ್ಟಂಟ್ ಮತ್ತು ಆಫೀಸರ್ ಸ್ಕೇಲ್‌ 8106 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 27/06/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕದಲ್ಲಿಯು ಇರುವ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಒಟ್ಟು ಹುದ್ದೆಗಳ ವಿವರ: 8106
* ಆಫೀಸ್ ಅಸಿಸ್ಟೆಂಟ್ ( ಮಲ್ಟಿಪರ್ಪಸ್ ) : 4,483 
* ಆಫೀಸರ್ ಸ್ಕೇಲ್ I : 2,676 
* ಆಫೀಸರ್ ಸೈಲ್ II : 947 
* ಕರ್ನಾಟಕದಲ್ಲಿರುವ ಹುದ್ದೆಗಳ ವಿವರ
 • ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್) 
- ಕರ್ನಾಟಕ ಗ್ರಾಮೀಣ್ ಬ್ಯಾಂಕ್ : 104 
- ಕರ್ನಾಟಕ ವಿಕಾಸ್ ಗ್ರಾಮೀಣ ಬ್ಯಾಂಕ್ : 69 
•  ಆಫೀಸರ್ ಸ್ಕೇಲ್  I 
- ಕರ್ನಾಟಕ ಗ್ರಾಮೀಣ್ ಬ್ಯಾಂಕ್ : 231 
- ಕರ್ನಾಟಕ ವಿಕಾಸ್ ಗ್ರಾಮೀಣ ಬ್ಯಾಂಕ್ : 198 
 • ಆಫೀಸರ್ ಸ್ಟೇಲ್ II : ಜನರಲ್ ಬ್ಯಾಂಕಿಂಗ್ ಆಫೀಸರ್
-  ಕರ್ನಾಟಕ ಗ್ರಾಮೀಣ್ ಬ್ಯಾಂಕ್ : 151 
- ಕರ್ನಾಟಕ ವಿಕಾಸ್ ಗ್ರಾಮೀಣ ಬ್ಯಾಂಕ್ : 79 

No. of posts:  8106
Application Start Date:  8 ಜೂನ್ 2022
Application End Date:  27 ಜೂನ್ 2022
Selection Procedure:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್‌ಲೈನ್‌ ಪರೀಕ್ಷೆ (ಪ್ರಿಲಿಮಿನರಿ, ಮುಖ್ಯ ಪರೀಕ್ಷೆ) ಮತ್ತು ಸಂದರ್ಶನವನ್ನು ನಡೆಸುವ ಮೂಲಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
* ಆಯಾ ರಾಜ್ಯಗಳ ಭಾಷೆಗಳಲ್ಲಿ ಪ್ರಶ್ನೆ ಪತ್ರಿಕೆ ಇರಲಿದೆ.

Qualification:

 ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಿಎ / ಬ್ಯಾಚುಲರ್ ಡಿಗ್ರಿ/ ಎಂಬಿಎ ಹಾಗೂ ಸಂಬಂಧಿಸಿದ ವಿಷಯದಲ್ಲಿ ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
* ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. 

Fee:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 
* ಸಾಮಾನ್ಯ, ಮತ್ತು OBC ವರ್ಗದ ಅಭ್ಯರ್ಥಿಗಳಿಗೆ ರೂ.850. ಹಾಗೂ 
* SC/ ST/ PWD ಅಭ್ಯರ್ಥಿಗಳಿಗೆ ರೂ.175.ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. 

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು  ಗರಿಷ್ಠ 40 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾಧ್ಯಂತ, KA,
To Download Official Notification

Comments