ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಇಲ್ಲಿ ಖಾಲಿ ಇರುವ 11 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by: Hanamant Katteppanavar | Date:22 ಜನವರಿ 2021

ಭಾರತದ ಅತ್ಯುನ್ನತ ಸಂಸ್ಥೆಯಾದ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಯು ಭಾರತ ಸರ್ಕಾರದ ಆರೋಗ್ಯ ಸಂಶೋಧನಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮೂಲಕ ಧನಸಹಾಯ ಪಡೆಯುವ ಸಂಸ್ಥೆಯಾಗಿದ್ದು, ಪ್ರಸ್ತುತ ಇಲ್ಲಿ ಖಾಲಿ ಇರುವ 11 ಆಡಳಿತ ಅಧಿಕಾರಿ, ವಿಭಾಗ ಅಧಿಕಾರಿ ಮತ್ತು ಅಕೌಂಟ್ಸ್ ಆಫೀಸರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರುವರಿ 26 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
No. of posts: 11
Application End Date: 26 ಫೆಬ್ರುವರಿ 2021
Work Location: Across India
Selection Procedure: ಮೊದಲು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಆಯ್ಕೆಪಟ್ಟಿ ತಯಾರಿಸಿ, ನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಜೊತೆಗೆ ಕಂಪ್ಯೂಟರ್ ಜ್ಞಾನ ಮತ್ತು ಅಕೌಂಟ್ಸ್ ಸಾಫ್ಟ್‌ವೇರ್ ನಲ್ಲಿ (ಬಜೆಟ್ / ಹಣಕಾಸು / ಖಾತೆಗಳಲ್ಲಿ) 02 ರಿಂದ 03 ವರ್ಷಗಳ ಕೆಲಸದ ಅನುಭವ ಹೊಂದಿರಬೇಕು.
Age Limit:
ಗರಿಷ್ಠ 56 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
Pay Scale:
- ಆಡಳಿತ ಅಧಿಕಾರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ - 56,100/- ರೂ ದಿಂದ 1,77,500/- ರೂ
- ವಿಭಾಗ ಅಧಿಕಾರಿ ಮತ್ತು ಅಕೌಂಟ್ಸ್ ಆಫೀಸರ್ (IR ಗ್ರೇಡ್) ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ - 44,900/- ರೂ ದಿಂದ 1,42,400/- ರೂ
- ಅಕೌಂಟ್ಸ್ ಆಫೀಸರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ - 56100/- ರೂ ದಿಂದ 177500 /- ರೂ ಗಳವರೆಗೆ ವೇತನವನ್ನು ನೀಡಲಾಗುವುದು.
- ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಎಲ್ಲ ಮೂಲ ದಾಖಲೆಗಳೊಂದಿಗೆ ಈ ಕೆಳಗೆ ನೀಡಿರುವ ವಿಳಾಸಕ್ಕೆ ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ತಲುಪುವಂತೆ ಅರ್ಜಿ ಸಲ್ಲಿಸಬೇಕು.
- ಕಚೇರಿಯ ವಿಳಾಸ :
Assistant Director General (Administration) (l),
lndian Council of Medical Research,
Ramalin Baswami Bhawan,
Ansari Nagar, Post Box -4911, New Delhi-110029
ಅರ್ಜಿ ತಲುಪಲು ನಿಗದಿಪಡಿಸಿದ ಕೊನೆಯ ದಿನಾಂಕ ಫೆಬ್ರುವರಿ 26, 2021





Comments