Loading..!

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Tags: Degree
Published by: Yallamma G
|
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತದ ಅತ್ಯುನ್ನತ ಸಂಸ್ಥೆಯಾದ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಯು ಭಾರತ ಸರ್ಕಾರದ ಆರೋಗ್ಯ ಸಂಶೋಧನಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮೂಲಕ ಧನಸಹಾಯ ಪಡೆಯುವ ಸಂಸ್ಥೆಯಾಗಿದ್ದು, ಪ್ರಸ್ತುತ ಇಲ್ಲಿ ಖಾಲಿ ಇರುವ 44 ಟೆಕ್ನಿಕಲ್ ಅಸಿಸ್ಟೆಂಟ್, ಟೆಕ್ನಿಷನ್ ಮತ್ತು ಲ್ಯಾಬೊರೇಟರಿ ಅಟೆಂಡೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16-06-2024 ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 44 
ಟೆಕ್ನಿಕಲ್ ಅಸಿಸ್ಟೆಂಟ್ : 8
ಟೆಕ್ನಿಷನ್ : 14
ಲ್ಯಾಬೊರೇಟರಿ ಅಟೆಂಡೆಂಟ್ : 22

Job Overview
No. of posts
44
Start Date
30 ಮೇ 2024
End Date
16 ಜೂನ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PUC/ ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. 
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 1200/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.  
SC/ ST/ Ex-servicemen/ ಮಹಿಳಾ ಅಭ್ಯರ್ಥಿಗಳಿಗೆ : 1000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
ಟೆಕ್ನಿಕಲ್ ಅಸಿಸ್ಟೆಂಟ್ : 30
ಟೆಕ್ನಿಷನ್ : 28
ಲ್ಯಾಬೊರೇಟರಿ ಅಟೆಂಡೆಂಟ್ : 25
ವಯೋಮಿತಿ ಸಡಿಲಿಕೆ :
OBC ಅಭ್ಯರ್ಥಿಗಳಿಗೆ : 3ವರ್ಷ 
SC/ST ಅಭ್ಯರ್ಥಿಗಳಿಗೆ : 5ವರ್ಷ 
PwD ಅಭ್ಯರ್ಥಿಗಳಿಗೆ : 10ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.   

To Download Official Notification
Related Tags: Degree

Comments