ಇಡಗುಂಜಿ ಶ್ರೀ ವಿನಾಯಕ ದೇವಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ

ಉತ್ತರ ಕನ್ನಡ ಜಿಲ್ಲೆಯ ಇಡಗುಂಜಿ ಶ್ರೀ ವಿನಾಯಕ ದೇವಾಲಯದಲ್ಲಿ ಖಾಲಿ ಇರುವ 23 ಮಣಿಗಾರರು, ಗುಮಾಸ್ತರು, ಮುಖ್ಯ ಅಡುಗೆ ತಯಾರಕರು, ಸಹಾಯಕ ಅಡುಗೆಯವರು ಕಂ ಊಟ ಬಡಿಸುವವರು, ಭದ್ರತಾ ಸಿಬ್ಬಂದಿ ಮತ್ತು ಸ್ಕಾವೆಂಜರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ21-10-2024 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ.
- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮುಖ್ಯ ಅಡುಗೆ ತಯಾರಕರು, ಸಹಾಯಕ ಅಡುಗೆಯವರು ಕಂ ಊಟ ಬಡಿಸುವವರು, ಸ್ವಚ್ಚತೆಗಾರರು (ಭೋಜನಾಲಯ ಎಲ್ಲ ಪಾತ್ರೆಗಳನ್ನು ಸ್ವಚ್ಛಗೊಳಿಸುವವರು), ಭೋಜನಲಯದ ಮುಸುರೆ ಒರೆಸುವವರು ಮತ್ತು ಸ್ಕಾವೆಂಜರ್ ಹುದ್ದೆಗಳಿಗೆ ದಿನಾಂಕ 27 ಅಕ್ಟೋಬರ್ 2024 ಬೆಳಿಗ್ಗೆ10.00 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
- ಹಾಗೂ ಮಣಿಗಾರರು, ಗುಮಾಸ್ತರು, ಭದ್ರತಾ ಸಿಬ್ಬಂದಿ ಮತ್ತು ಕಚೇರಿ ಪರಿಚಾರಕ ಹುದ್ದೆಗಳಿಗೆ ದಿನಾಂಕ 03 ನವೆಂಬರ್ 2024 ಬೆಳಿಗ್ಗೆ10.00 ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಉತ್ತರ ಕನ್ನಡ, ಕಾರವಾರ
ಹುದ್ದೆಗಳ ವಿವರ : 23
ಮಣಿಗಾರರು - 1
ಗುಮಾಸ್ತರು - 1
ಮುಖ್ಯ ಅಡುಗೆ ತಯಾರಕರು - 2
ಸಹಾಯಕ ಅಡುಗೆಯವರು ಕಂ ಊಟ ಬಡಿಸುವವರು - 2
ಸ್ವಚ್ಚತೆಗಾರರು (ಭೋಜನಾಲಯ ಎಲ್ಲ ಪಾತ್ರೆಗಳನ್ನು ಸ್ವಚ್ಛಗೊಳಿಸುವವರು) - 6 ಭೋಜನಲಯದ ಮುಸುರೆ ಒರೆಸುವವರು - 2
ಭದ್ರತಾ ಸಿಬ್ಬಂದಿ - 6
ಕಚೇರಿ ಪರಿಚಾರಕ - 1
ಸ್ಕಾವೆಂಜರ್ - 2
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ SSLC / PUC ಪದವಿ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೇಂದ್ರ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ 6,000/- ರೂಗಳಿಂದ 20,000/- ರೂ ಗಳ ವರೆಗೆ ಮಾಸಿಕ ವೇತನ ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments