ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

1964 ರಲ್ಲಿ ಸ್ಥಾಪನೆಯಾಗಿರುವ ಭಾರತೀಯ ಉದ್ಯಮದ ಅಭಿವೃದ್ಧಿಗೆ ಸಾಲ ಮತ್ತು ಇತರೆ ಹಣಕಾಸು ಸೌಲಭ್ಯಗಳನ್ನು ಒದಗಿಸುವ ಕಾಯಿದೆ ಮೂಲಕ ಸ್ಥಾಪಿಸಲಾದ, ಅಭಿವೃದ್ಧಿ ಹಣಕಾಸು ಸಂಸ್ಥೆ ಮತ್ತು ಜೀವ ವಿಮಾ ನಿಗಮದ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾಗಿರುವ ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ (IDBI) ನಲ್ಲಿ ಖಾಲಿ ಇರುವ600 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ :28/02/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
- ಪ್ರಮುಖ ದಿನಾಂಕಗಳು :
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17-02-2023
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಶುಲ್ಕ ಪಾವತಿ: 28/02/2023
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ SSLC/ PUC/ ಮತ್ತು ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
-ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
- ಎಲ್ಲಾ ಇತರೆ ಅಭ್ಯರ್ಥಿಗಳಿಗೆ (ಅರ್ಜಿ ಶುಲ್ಕ + ಸೂಚನೆ ಶುಲ್ಕಗಳು) ಒಟ್ಟು : ರೂ. 1000/-
- SC/ ST/ PwD ಅಭ್ಯರ್ಥಿಗಳಿಗೆ (ಇಂಟಿಮೇಷನ್ ಶುಲ್ಕಗಳು): ರೂ. 200/- ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳು ಕನಿಷ್ಠ 20 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ
- SC ST ಪ್ರವರ್ಗ-1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 5 ವರ್ಷ
- ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 36000/- ಮಾಸಿಕ ವೇತನವನ್ನು ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments