ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

- 1964 ರಲ್ಲಿ ಸ್ಥಾಪನೆಯಾಗಿರುವ ಭಾರತೀಯ ಉದ್ಯಮದ ಅಭಿವೃದ್ಧಿಗೆ ಸಾಲ ಮತ್ತು ಇತರ ಹಣಕಾಸು ಸೌಲಭ್ಯಗಳನ್ನು ಒದಗಿಸುವ ಕಾಯಿದೆ ಮೂಲಕ ಸ್ಥಾಪಿಸಲಾದ, ಅಭಿವೃದ್ಧಿ ಹಣಕಾಸು ಸಂಸ್ಥೆ ಮತ್ತು ಜೀವ ವಿಮಾ ನಿಗಮದ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾಗಿರುವ ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ (IDBI) ನಲ್ಲಿ 56 ಸಹಾಯಕ ಜನರಲ್ ಮ್ಯಾನೇಜರ್ ಮತ್ತು ಮ್ಯಾನೇಜರ್ ಸೇರಿದಂತೆ ಹುದ್ದೆಗಳನ್ನೂ ನೇಮಕಾತಿಗಾಗಿ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15 ಸೆಪ್ಟೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಪೂರ್ವಭಾವಿ ಸ್ಕ್ರೀನಿಂಗ್, ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವದು.
ಹುದ್ದೆಗಳ ವಿವರ : 56
ಸಹಾಯಕ ಜನರಲ್ ಮ್ಯಾನೇಜರ್ - 25
ಮ್ಯಾನೇಜರ್ - 31
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-09-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-09-2024
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 15-09-2024
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಾಸಾಗಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಾಮಾನ್ಯ, EWS ಮತ್ತು OBC ಅಭ್ಯರ್ಥಿಗಳಿಗೆ: ₹1000/- ರೂ ಶುಲ್ಕವನ್ನು ಪಾವತಿಸಬೇಕಿದ್ದು,
SC ST ಅಭ್ಯರ್ಥಿಗಳು 200/- ರೂ ಶುಲ್ಕ ಪಾವತಿಸಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 25 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.





Comments