ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ದಲ್ಲಿ ಖಾಲಿ ಇರುವ 1000 ಹುದ್ದೆಗಳ ಭರ್ಜರಿ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

1964 ರಲ್ಲಿ ಸ್ಥಾಪನೆಯಾಗಿರುವ ಭಾರತೀಯ ಉದ್ಯಮದ ಅಭಿವೃದ್ಧಿಗೆ ಸಾಲ ಮತ್ತು ಇತರ ಹಣಕಾಸು ಸೌಲಭ್ಯಗಳನ್ನು ಒದಗಿಸುವ ಕಾಯಿದೆ ಮೂಲಕ ಸ್ಥಾಪಿಸಲಾದ, ಅಭಿವೃದ್ಧಿ ಹಣಕಾಸು ಸಂಸ್ಥೆ ಮತ್ತು ಜೀವ ವಿಮಾ ನಿಗಮದ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾಗಿರುವ ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ (IDBI) ನಲ್ಲಿ1000 ಎಕ್ಸಿಕ್ಯೂಟಿವ್-ಸೇಲ್ಸ್ & ಆಪರೇಷನ್ಸ್(ESO) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಾಮಾನ್ಯ, EWS ಮತ್ತು OBC ಅಭ್ಯರ್ಥಿಗಳಿಗೆ: ₹1000/- ರೂ ಶುಲ್ಕವನ್ನು ಪಾವತಿಸಬೇಕಿದ್ದು,
SC ST ಅಭ್ಯರ್ಥಿಗಳು 200/- ರೂ ಶುಲ್ಕ ಪಾವತಿಸಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 22 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಮೀರಿರಬಾರದು .
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 31,000/- ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.



Comments