ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ದಲ್ಲಿ ಖಾಲಿ ಇರುವ 600 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 600 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 30 ಸೆಪ್ಟೆಂಬರ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ಮತ್ತು ದಾಖಲಾತಿಯ ಪರಿಶೀಲನೆಯ ಮೂಲಕ ಹುದ್ದೆಗಳಿಗೆ ಆಯ್ಕ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ಪಡೆದಿರಬೇಕಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಹಾಗೂ SC/ST ಅಭ್ಯರ್ಥಿಗಳು 200/- ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 20 ಹಾಗೂ ಗರಿಷ್ಠ 25 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
- OBC ಅಭ್ಯರ್ಥಿಗಳಿಗೆ 3 ವರ್ಷ
- SC ST ಪ್ರವರ್ಗ-1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 5 ವರ್ಷ
- ಮಾಜಿ ಸೈನಿಕರು ಹಾಗೂ ಅಂಗವಿಕಲ ಅಭ್ಯರ್ಥಿಗಳು 10 ವರ್ಷಗಳ ವಯೋಮಿತಿ ಸಡಿಲಿಕೆ ಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವು 61,400/– ರೂ ಗಳಿಂದ 65,000/- ರೂ ಗಳ ವರೆಗೆ ನಿಗದಿ ಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments