ಐಐಟಿ ಜೋಧಪುರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ

ಜೋಧಪುರದಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT)ಯಲ್ಲಿ ಖಾಲಿ ಇರುವ 122 ಟೆಕ್ನಿಕಲ್ ಮತ್ತು ಅಡ್ಮಿನಿಸ್ಟ್ರೇಟಿವ್ ಸೇರಿದಂತೆ ವಿವಿಧ ಹುದ್ದೆಯನ್ನು ನೇಮಕ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ07/05/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 122
ಟೆಕ್ನಿಕಲ್ - 74
ಅಡ್ಮಿನಿಸ್ಟ್ರೇಟಿವ್ - 48
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ Diploma/ MS/ MBBS/ MD/ LLB ಸ್ನಾತಕೋತ್ತರ ಪದವಿ/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 1000 ರೂ ಗಳಿಂದ 500/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. SC/ ST ಮಾಜಿ ಸೈನಿಕರು/ PwBD/ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 27 ವರ್ಷ ಹಾಗೂ ಗರಿಷ್ಠ 50 ವರ್ಷ ವಯೋಮಿತಿಯನ್ನು ಮೀರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
-ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments