ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ 71 ಇನ್ಸ್ಪೆಕ್ಟರ್ ಆಫ್ ಇನ್ ಕಮ್ ಟ್ಯಾಕ್ಸ್, ಟ್ಯಾಕ್ಸ್ ಅಸಿಸ್ಟೆಂಟ್ ಮತ್ತು ಮಲ್ಟಿ ಟಾಸ್ಕ್ ಕಿಂಗ್ ಸ್ಟಾಫ್ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 24/03/2023ರ ಸಂಜೆ 6 ಘಂಟೆಯೊಳಗೆ ಆಫ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಕಚೇರಿ ವಿಳಾಸ:
Commissioner of Income Tax O/o principal chief Commissioner Of Income tax,
Karnataka and govregion, Central Revenue building No.1 Queens Road Bengaluru Karnataka-560001
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 100/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC/ ST/ PWE/ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನ್ವಯವಾಗುವಂತೆ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಗರಿಷ್ಠ ವಯೋಮಿತಿಯನ್ನು ಹೊಂದಿರಬೇಕು.
Inspector of Income Tax ಹುದ್ದೆಗಳಿಗೆ : 30
Tax Assistant ಹುದ್ದೆಗಳಿಗೆ : 27
Multi Tasking Staff ಹುದ್ದೆಗಳಿಗೆ : 25 ವರ್ಷ ವಯೋಮಿತಿಯನ್ನು ಮೀರಿರಬಾರದು.
* ವರ್ಗಾವಾರು ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ 18,000/- ರಿಂದ 44,900/-ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments