ಭಾರತೀಯ ಸೇನೆಯಾ ಫಿರಂಗಿದಳದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ SSLC ಹಾಗು PUC ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ಸೇನೆಯು ನಾಸಿಕ್ ನಲ್ಲಿನ ಇಂಡಿಯನ್ ಆರ್ಮಿ ಫಿರಂಗಿದಳದಲ್ಲಿ ಖಾಲಿ ಇರುವ ಕೆಳ ದರ್ಜೆ ಸಹಾಯಕ, ಕುಕ್, ಕಾರ್ಪೆಂಟರ್, ಎಂಟಿಎಸ್ (ವಾಚ್‌ಮನ್) ಸೇರಿದಂತೆ ವಿವಿಧ ಒಟ್ಟು 107 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಪರೀಕ್ಷೆ ಮಾದರಿ
ಪರೀಕ್ಷೆ ಅವಧಿ - 2 ಗಂಟೆ.
ಒಟ್ಟು ಅಂಕಗಳು- 150 .
ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ:
'The Commandant, Headquarters, Artillery Centre,
Nasik Road Camp PIN-422102'
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಕೌಶಲ್ಯ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ ಈ ಕೆಳಗಿನ ವಯೋಮಿತಿಯನ್ನು ಮೀರಿರಬಾರದು,
- ಸಾಮಾನ್ಯವರ್ಗ 25 ವರ್ಷ
- ಹಿಂದುಳಿದ ವರ್ಗ 28 ವರ್ಷ
- ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 30 ವರ್ಷಗಳ ಗರಿಷ್ಠ ವಯೋಮಿತಿಗಳನ್ನು ಮೀರಿರಬಾರದು.
ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ಲೆವೆಲ್-1, ಲೆವೆಲ್-2 ಪೇ ಮೆಟ್ರಿಕ್ಸ್ ಆಧಾರದಲ್ಲಿ ರೂ.19,000 ದಿಂದ ಆರಂಭಗೊಂಡು 63,000 ವರೆಗೆ ಮಾಸಿಕ ವೇತನವನ್ನು ಪಡೆಯಲಿದ್ದಾರೆ.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.

Comments