ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 44,228 ವಿವಿಧ ಹುದ್ದೆಗಳಿಗೆ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 44,228 ಗ್ರಾಮೀಣ ಡಾಕ ಸೇವಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SSLC ಪಾಸಾದ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ವಿಶೇಷವಾಗಿ ಕರ್ನಾಟಕ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1940 ಗ್ರಾಮೀಣ ಡಾಕ ಸೇವಕ, ಬ್ರಾಂಚ್ ಪೋಸ್ಟ್‌ಮಾಸ್ಟರ್, ಸಹಾಯಕ ಬ್ರಾಂಚ್ ಪೋಸ್ಟ್‌ಮಾಸ್ಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ, ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.
ಈ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆಯು ಜುಲೈ 15, 2024 ರಂದು ಪ್ರಾರಂಭಗೊಂಡು ಮತ್ತು ಆಗಸ್ಟ್ 05, 2024 ರಂದು ಮುಕ್ತಾಯಗೊಳ್ಳುತ್ತದೆ.
* ಹುದ್ದೆಗಳ ವಿವರ :
- ಬ್ರಾಂಚ್ ಪೋಸ್ಟ್‌ಮಾಸ್ಟರ್ (ಬಿಪಿಎಂ)
- ಸಹಾಯಕ ಬ್ರಾಂಚ್ ಪೋಸ್ಟ್‌ಮಾಸ್ಟರ್ (ಎಬಿಪಿಎಂ)
- ಗ್ರಾಮೀಣ ಡಾಕ ಸೇವಕ
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ 10 ನೇ (SSLC) ತರಗತಿಯನ್ನು ಪೂರ್ಣಗೊಳಿಸಿರಬೇಕು.
- ಹಿಂದುಳಿದ ವರ್ಗದ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - 100 /- ರೂ.ಗಳ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ ಮತ್ತು
- ಎಲ್ಲಾ ಮಹಿಳಾ ಮತ್ತು SC/ST ಅಭ್ಯರ್ಥಿಗಳಿಗೆ- ಯಾವುದೇ ರೀತಿಯ ಅರ್ಜಿ ಶುಲ್ಕವಿರುವುದಿಲ್ಲ.
- ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ - 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಮತ್ತು ಗರಿಷ್ಠ- 40 ವರ್ಷಗಳ ವಯೋಮಿತಿ ಮೀರಿರಬಾರದು.
* ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷಗಳು
SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
PWD (ಸಾಮಾನ್ಯ) ಅಭ್ಯರ್ಥಿಗಳಿಗೆ: 10 ವರ್ಷಗಳು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 10,000/- ರೂ ಗಳಿಂದ 29,380/– ರೂ ಗಳ ವರೆಗೆ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.



Comments