ಅಗ್ನಿಪಥ ಯೋಜನೆಯಡಿ ಭೂಸೇನೆಯಲ್ಲಿ ಖಾಲಿ ಇರುವ 25000 ಕ್ಕೂ ಹೆಚ್ಚು ಅಗ್ನಿವೀರರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಅಗ್ನಿಪಥ ಯೋಜನೆಯಡಿ ಭೂಸೇನೆಯೆಲ್ಲಿ 25000 ಕ್ಕೂ ಹೆಚ್ಚು ಅಗ್ನಿವೀರ ಹುದ್ದೆಗಳ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 13/02/2024 ರಿಂದ ಪ್ರಾರಂಭಗೊಂಡು ದಿನಾಂಕ22/03/2024 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. ಈ ಹುದ್ದೆಗಳನ್ನು ನಾಲ್ಕು ವರ್ಷದ ಅವಧಿಯ ವರೆಗೆ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆಳಗಿನಂತೆ ಮಾಸಿಕ ಗೌರವಧನವನ್ನು ನೀಡಲಾಗುತ್ತದೆ.
ಮೊದಲನೇ ವರ್ಷ : ರೂ.30,000 ಜತೆಗೆ ಇತರೆ ಭತ್ಯೆಗಳು.
ಎರಡನೇ ವರ್ಷ : ರೂ.33,000 ಜತೆಗೆ ಇತರೆ ಭತ್ಯೆಗಳು.
ಮೂರನೇ ವರ್ಷ : ರೂ.36,500 ಜತೆಗೆ ಇತರೆ ಭತ್ಯೆಗಳು.
ನಾಲ್ಕನೇ ವರ್ಷ : ರೂ.40,000 ಜತೆಗೆ ಇತರೆ ಭತ್ಯೆಗಳು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ





Comments