ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಭಾರತೀಯ ವಾಯುಪಡೆಯು ಅಪ್ರೆಂಟಿಸ್‌ಶಿಪ್ ಟ್ರೈನಿಂಗ್ (AFTWT) 01/2023 ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು05/01/2023 ರೊಳಗಾಗಿ ಆನ್ಲ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 108
ಮೆಷಿನಿಸ್ಟ್ - 03
ಶೀಟ್ ಮೆಟಲ್ - 15
ವೆಲ್ಡರ್ (ಗ್ಯಾಸ್ ಮತ್ತು ಇಲೆಕ್ಟ್) - 04
A4TWT ಎಂಟ್ರಿ ಮೆಕ್ಯಾನಿಕ್ ರೇಡಿಯೋ ರಾಡಾರ್ ಏರ್‌ಕ್ರಾಫ್ಟ್ ಅಥವಾ ಎಲೆಕ್ಟ್ರಾನಿಕ್ ಮೆಕ್ಯಾನಿಕ್ - 13
ಕಾರ್ಪೆಂಟರ್ - 02
ಎಲೆಕ್ಟ್ರಿಷಿಯನ್ ಏರ್‌ಕ್ರಾಫ್ಟ್ - 33
ಫಿಟ್ಟರ್/ಮೆಕ್ಯಾನಿಕ್ ಮೆಷಿನ್ ಟೂಲ್ ನಿರ್ವಹಣೆ - 38
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ದೈಹಕ ಪರೀಕ್ಷೆಯ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC/ PUC/ ITI ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 14 ವರ್ಷ ವಯಸ್ಸು ಹಾಗೂ ಗರಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಮೀಸಲಾತಿ ವರ್ಗದವರಿಗೆ ವಯೋಮಿತಿ ಸಡಿಲಿಕೆ ಇರಲಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 8855 /- ರೂ ವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments