ಭಾರತೀಯ ವಾಯು ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ I PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ

ಭಾರತೀಯ ವಾಯು ಪಡೆಯಲ್ಲಿ ಖಾಲಿ ಇರುವ 3500 ಅಗ್ನಿವೀರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 17/08/2023 ರೊಳಗೆ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅಕ್ಟೊಬರ್ 13 ರಂದು ಆನ್ ಲೈನ್ ಪರೀಕ್ಷೆ ನಡೆಸಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ಮತ್ತು ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು PUC (12th)/ ಇಂಜಿನಿಯರಿಂಗ್/ ಯಾವುದೇ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 250/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 23 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ30,000/- ರಿಂದ 40,000/-ರೂಗಳು ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments