ಭಾರತೀಯ ವಾಯು ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ I PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Published by: Yallamma G | Date:5 ಜೂನ್ 2023

ಭಾರತೀಯ ವಾಯು ಪಡೆಯಲ್ಲಿ ಖಾಲಿ ಇರುವ ಫ್ಲೈಯಿಂಗ್, ಟೆಕ್ನಿಕಲ್ ಮತ್ತು ನಾನ್ ಟೆಕ್ನಿಕಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/06/2023 ರೊಳಗೆ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಆಗಸ್ಟ್ 25, 26, 27 ರಂದು ಏರ್ ಪೋರ್ಸ್ ಕಾಮನ್ ಅಡ್ಮಿನಿಸ್ಟ್ರೇಷನ್ ಟೆಸ್ಟ್ ನಡೆಸಲಾಗುವುದು
No. of posts: 276
Application Start Date: 5 ಜೂನ್ 2023
Application End Date: 30 ಜೂನ್ 2023
Work Location: ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು PUC (12th)/ ಇಂಜಿನಿಯರಿಂಗ್/ ಯಾವುದೇ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 250/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 20 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 26 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Pay Scale:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 56,100/- ರಿಂದ 1,77,500/-ರೂಗಳು ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments