ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ವಾಯು ಪಡೆಯಲ್ಲಿ ಖಾಲಿ ಇರುವ ಒಟ್ಟು 182 ಹಿಂದಿ ಟೈಪಿಸ್ಟ್, ಲೋವರ್ ಡಿವಿಷನ್ ಕ್ಲರ್ಕ್ ಮತ್ತು ಸಿವಿಲಿಯನ್ ಮೆಕ್ಯಾನಿಕಲ್ ಸಾರಿಗೆ ಚಾಲಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 2024 ಸೆಪ್ಟೆಂಬರ್ 01 ರೊಳಗಾಗಿ ಆಪ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 03 ಆಗಸ್ಟ್ 2024 ಹಾಗೂ ಕೊನೆಯ ದಿನಾಂಕ 01 ಸೆಪ್ಟೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 182
ಕೆಳ ವಿಭಾಗದ ಗುಮಾಸ್ತ - 157
ಹಿಂದಿ ಟೈಪಿಸ್ಟ್ - 18
ಸಿವಿಲಿಯನ್ ಮೆಕ್ಯಾನಿಕಲ್ ಸಾರಿಗೆ ಚಾಲಕ - 7
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC/ PUC ಪದವಿ ವಿದ್ಯಾರ್ಹತೆಯನ್ನು ಮಾನ್ಯತೆಯನ್ನು ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ಹಾಗೂ ಗರಿಷ್ಠ 25 ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 3 ವರ್ಷಗಳು
SC, ST ಅಭ್ಯರ್ಥಿಗಳಿಗೆ: 5 ವರ್ಷಗಳು
PH (UR) ಅಭ್ಯರ್ಥಿಗಳಿಗೆ: 10 ವರ್ಷಗಳು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments