ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ವಾದ್ಯ ವಾದಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಭಾರತೀಯ ವಾಯುಪಡೆಯಲ್ಲಿ ಜುಲೈ 03 ರಿಂದ 05 ರ ವರೆಗೆ ರ್ಯಾಲಿ ನಡೆಯುತ್ತಿದ್ದು, ಇದರಲ್ಲಿ ವಾದ್ಯ ವಾದಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಉತ್ತರಪ್ರದೇಶದ ಕಾನ್ಪುರ್ ಮತ್ತು ಕರ್ನಾಟಕದ ಬೆಂಗಳೂರಿನಲ್ಲಿ ರ್ಯಾಲಿ ನಡೆಯಲಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ 22 ಮೇ 2024 ಹಾಗೂ ಕೊನೆಯ ದಿನಾಂಕ 5 ಜೂನ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ
ಅರ್ಜಿ ಸಲ್ಲಿಸುವ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ
ಭಾರತೀಯ ವಾಯುಪಡೆಯಲ್ಲಿ ವಾದ್ಯ ವಾದಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು. ಸಂಗೀತದಲ್ಲಿ ಪ್ರಾವಿಣ್ಯ ಕಡ್ಡಾಯ. ವಾದ್ಯ ವಾದನದ ಟೆಂಪೋ, ಪಿಚ್ ಬಗ್ಗೆ ಜ್ಞಾನ ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದ ಅಭ್ಯರ್ಥಿಗಳಿಗೆ
ಸಾಮಾನ್ಯ ಅಭ್ಯರ್ಥಿಗಳು 100/-
OBC/EWS ಅಭ್ಯರ್ಥಿಗಳು 100/-
SC/ST ಅಭ್ಯರ್ಥಿಗಳು 100/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಭಾರತೀಯ ವಾಯುಪಡೆಯ ನಿಯಮಾನುಸಾರದಂತೆ ವೇತನವನ್ನು ನಿಗದಿಪಡಿಸಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments