ಭಾರತೀಯ ಸೇನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಸೇನೆಯಲ್ಲಿ ಖಾಲಿ ಇರುವ ಎಂಟಿಎಸ್, ಮೆಸ್ ವೆಟರ್, ಬಾರ್ಬರ್ ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು3 ಮಾರ್ಚ್ 2023 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ : Group Commander, HQ 22 Movement Control Group,
PIN-900328, c/o 99 APO
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಟ್ರೇಡ್ ಪರೀಕ್ಷೆ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವಬ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ 25 ರೂ ಗಳ ಅಂಚೆ ಅಂಚೆ ಸ್ಟ್ಯಾಂಪ್ ಲಗತ್ತಿಸಬೇಕಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿರಬೇಕು.
- ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ Rs. 18,000/- ರೂ ಗಳಿಂದ 56900/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments