Loading..!

ಭಾರತೀಯ ಸೇನೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Savita Halli | Date:16 ಮೇ 2022
not found

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಬೇಕೆಂಬ ಹಂಬಲ ಇಟ್ಟುಕೊಂಡ ಅಭ್ಯರ್ಥಿಗಳಿಗೆ ಡೆಹ್ರಾಡೂನ್‌ನಲ್ಲಿರುವ ಇಂಡಿಯನ್ ಮಿಲಿಟರಿ ಅಕಾಡೆಮಿಯಿಂದ(IMA) ಪದವಿ ಜತೆಗೆ, ಸೇನೆಯಲ್ಲಿ ಲೆಫ್ಟಿನೆಂಟ್ ಹುದ್ದೆಯನ್ನು ಪಡೆಯುವ ಅವಕಾಶವಿದ್ದು, ಇಂಡಿಯನ್ ಮಿಲಿಟರಿ ಅಕಾಡೆಮಿಯಲ್ಲಿ 2023 ರ ಜನವರಿಯಲ್ಲಿ ಪ್ರಾರಂಭಿಸಲಾಗುತ್ತಿರುವ 136 ನೇ ಟೆಕ್ನಿಕಲ್ ಗ್ರಾಜುಯೇಟ್ ಕೋರ್ಸ್‌ಗೆ(TGC-136) ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 09/06/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ

No. of posts:  40
Application Start Date:  14 ಮೇ 2022
Application End Date:  9 ಜೂನ್ 2022
Work Location:  ಭಾರತದಾಧ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳನ್ನು ಆಧರಿಸಿ ಅರ್ಜಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಂಜಿನಿಯರ್ ಪದವಿ ವಿದ್ಯಾರ್ಹತೆಯನ್ನು ಅಥವಾ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ  01/01/2023ರ ಅನ್ವಯ ಕನಿಷ್ಠ 20 ವರ್ಷ ಹಾಗೂ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* 02 ಜನವರಿ 1996 ಮತ್ತು 01 ಜನವರಿ 2003,ರ ನಡುವೆ ಜನಿಸಿರಬೇಕು.

Pay Scale:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 56,100/- ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.
ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments