ಭಾರತೀಯ ಸೇನೆಯಿಂದ 189 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಸೇನೆಯಲ್ಲಿ ಇಂಜಿನಿಯರಿಂಗ್ ಪದವೀಧರರಾಗಿರುವ ಅವಿವಾಹಿತ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳಿಂದ ಖಾಲಿ ಇರುವ ಒಟ್ಟು 189 ಶಾರ್ಟ್ ಸರ್ವಿಸ್ ಕಮಿಷನ್ ( ಎಸ್ಎಸ್‌ಸಿ ) ಅಧಿಕಾರಿ ಹುದ್ದೆಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 06/04/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು, ತದನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
- ಕರ್ನಾಟಕದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಸಂದರ್ಶನ ನಡೆಯಲಿದೆ .
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು B.E / B.Tech ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಇಂಜಿನಿಯರಿಂಗ್ ಅಂತಿಮ ವರ್ಷದಲ್ಲಿ ಓದುತ್ತಿರುವ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಲು ಅರ್ಹರು.
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 01.10.2022 ಕ್ಕೆ ಅನ್ವಯವಾಗುವಂತೆ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ, ಗರಿಷ್ಠ 27 ವರ್ಷ (02.10.1995 - 01.10.2002 ರ ನಡುವೆ ಜನಿಸಿರಬೇಕು).
* ವಿಧವಾ ಅಭ್ಯರ್ಥಿಗೆ ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ .
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments