ಭಾರತೀಯ ಸೇನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | SSLC ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು

ಭಾರತೀಯ ಸೇನೆಯಲ್ಲಿ ಮಹಿಳಾ ಮಿಲಿಟರಿ ಪೊಲೀಸರನ್ನು ನೇಮಕ ಮಾಡಿಕೊಳ್ಳಲು ಬೆಂಗಳೂರು ವಲಯ ನೇಮಕಾತಿ ಕಚೇರಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗಿದ್ದು, ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ಜನರಲ್ ಡ್ಯೂಟಿ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 15 ಮಾರ್ಚ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
* ಕರ್ನಾಟಕ ಅಷ್ಟೇ ಅಲ್ಲದೆ ಕೇರಳ ಮತ್ತು ಲಕ್ಷದ್ವೀಪ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಆನ್ ಲೈನ್ ಪರೀಕ್ಷೆ ಹಾಗೂ ದೈಹಿಕ ಪರೀಕ್ಷೆ ನಡೆಸುವದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC/ PUC/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 250/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 17 ವರ್ಷ 6 ತಿಂಗಳು ವಯಸ್ಸು ಹಾಗೂ ಗರಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ಈ ರೀತಿಯಾಗಿರುತ್ತದೆ.
ಪ್ರಥಮ ವರ್ಷ ಮಾಸಿಕ ವೇತನವು 30000 /- ರೂ ಗಳು
ದ್ವಿತೀಯ ವರ್ಷ ಮಾಸಿಕ ವೇತನವು 33,000/- ರೂ ಗಳು
ತೃತೀಯ ವರ್ಷ ಮಾಸಿಕ ವೇತನವು 36,000/- ರೂ ಗಳು ಹಾಗೂ
ಕೊನೆಯ ವರ್ಷ ಮಾಸಿಕ ವೇತನವು 40,000/- ರೂ ಗಳು ಹಾಗೂ ಇತರೆ ಭತ್ಯೆಗಳು
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments